Breaking
22 Mar 2026, Sun

ಯುವತಿಯ ಮೇಲೆ ಅತ್ಯಾಚಾರ: ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಬಂಧನ

ಉಡುಪಿ: ನಿರ್ಜನ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೋರ್ವನನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಪೆರ್ಡೂರು ಹಿಂದು ಜಾಗರಣಾ ವೇದಿಕೆಯ ನಾಯರ್‌ಕೋಡು ಘಟಕದ ಪ್ರದೀಪ್ ಪೂಜಾರಿ(26) ಎಂದು ಗುರುತಿಸಲಾಗಿದೆ.

ಪ್ರದೀಪ್ ಪೂಜಾರಿ ಯುವತಿಗೆ ಮದುವೆಯಾಗುವಂತೆ ಬಹುಕಾಲದಿಂದ ಕಿರುಕುಳ ನೀಡುತ್ತಿದ್ದನು. ಯುವತಿ ಮದುವೆಗೆ ನಿರಾಕರಿಸಿದ್ದರಿಂದ, ಈ ಹಿಂದೆ ಆಕೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅವನ ವಿರುದ್ಧ ದೂರು ನೀಡಿದ್ದರು. ನಂತರ ಪೊಲೀಸರು ಅವನನ್ನು ಬಂಧಿಸಿ, ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.

ಈ ಹಿನ್ನಲೆಯಲ್ಲಿ ನ.29ರಂದು ಮತ್ತೆ ಮದುವೆಯಾಗುವಂತೆ ಪೀಡಿಸಿದ್ದು ಆಕೆ ನಿರಾಕರಿಸಿದಾಗ ಆಕೆಯನ್ನು ಅಲ್ಲೇ ಕತ್ತು ಹಿಸುಕಿ ಬೆದರಿಸಿ, ಅತ್ಯಾಚಾರ ಎಸಗಿದನು ಎಂದು ದೂರಲಾಗಿದೆ.

ಯುವತಿಯ ಪೋಷಕರ ದೂರು ಆಧರಿಸಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪ್ರದೀಪ್ ಪೂಜಾರಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *