ಬೆಳ್ತಂಗಡಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನ. 30ರಂದು ನಡೆದಿದೆ.
ಮೃತರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ನಿವಾಸಿ ದೀಪಕ್ ಜಿ(24) ಎಂದು ಗುರುತಿಸಲಾಗಿದೆ.

ನಿಡ್ಲೆಯ ಪಾರ್ಪಿಕಲ್ ಸೇತುವೆ ಬಳಿಯ ತಿರುವಿನಲ್ಲಿ ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ.

ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು,ಅದಾಗಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತದರೂ ಕೊನೆಯುಸಿರೆಳೆದಿದ್ದಾರೆ. ಬೈಕ್ ಸವಾರ ಕಾರನ್ನು ಓವರ್ ಟೇಕ್ ಮಾಡಿದ ಸಂದರ್ಭ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.



