Breaking
9 May 2026, Sat

ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿ: 11 ಮಂದಿ ಸಾವು, 20 ಮಂದಿಗೆ ಗಾಯ

ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಸಮೀಪ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿರುವ ಘಟನೆ ನ. 30 ರಂದು ಸಂಜೆ ಸಂಭವಿಸಿದೆ.

ಒಂದು ಬಸ್ ತಿರುಪ್ಪೂರಿನಿಂದ ಕಾರೈಕುಡಿಗೆ ಪ್ರಯಾಣಿಸುತ್ತಿದ್ದು ಇನ್ನೊಂದು ಬಸ್ ಕಾರೈಕುಡಿಯಿಂದ ದಿಂಡಿಗಲ್ ಜಿಲ್ಲೆಯ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *