Breaking
22 Mar 2026, Sun

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಂಗಳೂರು : ವಿದ್ಯಾರ್ಥಿನಿಯೋವ೯ಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಸರುಘಟ್ಟ ರಸ್ತೆ ಸಮೀಪದ ಸೋಲದೇವನಹಳ್ಳಿ ಪ್ರದೇಶದಲ್ಲಿ ನ. 29ರಂದು ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ಹಾಸನ ಮೂಲದ ಬಿ. ಫಾರ್ಮ ಅಂತಿಮ ವರ್ಷದ ವಿದ್ಯಾರ್ಥಿನಿ ವತ್ಸಲಾ (19) ಎಂದು ಗುರುತಿಸಲಾಗಿದೆ.

ವತ್ಸಲಾ ಬೆಂಗಳೂರಿನ ಪಿಜಿ ವಸತಿಗೃಹದಲ್ಲಿ ವಾಸಿಸುತ್ತಿದ್ದು, ಬೆಳಗ್ಗೆ ತನ್ನ ಕೊಠಡಿಯಲ್ಲಿ ಎಂಟು ಪುಟಗಳ ಡೆತ್ ನೋಟ್ ಬರೆದ ಬಳಿಕ, ಮಧ್ಯಾಹ್ನ ಸುಮಾರು 2.30ರ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಡೆತ್ ನೋಟ್‌ನಲ್ಲಿ, “ಅಪ್ಪ, ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ. ನೀವು ಕೊಟ್ಟ ಪ್ರೀತಿ ಯಾರಿಂದಲೂ ಸಿಗುವುದಿಲ್ಲ. ನಿಮ್ಮ ಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಿಲ್ಲ. ನಾನು ಪ್ರೀತಿಸಿದ ಹುಡುಗನಿಗೂ ಮೋಸ ಮಾಡಲು ಮನಸ್ಸಿಲ್ಲ. ಹೀಗಾಗಿ ಸಾವೇ ನನ್ನ ಆಯ್ಕೆ,” ಎಂದು ಬರೆದಿದ್ದಾಳೆ.

ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *