ಪುತ್ತೂರು: ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯು ನಾಪತ್ತೆಯಾಗಿದ್ದು ಅವರ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಾಹಿತಿ ಪ್ರಕಾರ, ಆರ್ಥಿಕ ಸಮಸ್ಯೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಮೃತರು ಅವಿವಾಹಿತರಾಗಿದ್ದು, ತಾಯಿ, ಅಣ್ಣ, ಅಕ್ಕ, ತಮ್ಮ ಹಾಗೂ ತಂಗಿಯನ್ನು ಅಗಲಿದ್ದಾರೆ.
ಈ ಕುರಿತು ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




