Breaking
22 Sep 2026, Tue

ಆಟೋ ರಿಕ್ಷಾ ಮತ್ತು ಕಾರು ಡಿಕ್ಕಿ: ಚಾಲಕನಿಗೆ ಗಾಯ

ಉಡುಪಿ: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಡಿ. 1 ರಂದು ಕಾಪು ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ನಡೆದಿದೆ.

ಗಾಯಗೊಂಡ ಚಾಲಕನನ್ನು ರಫೀಕ್ ಎಂದು ಗುರುತಿಸಲಾಗಿದೆ.

ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಕಾರು ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ರಸ್ತೆಗೆ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಆಟೋರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *