Breaking
21 Jun 2026, Sun

ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣದಲ್ಲಿ ಇಬ್ಬರು ಅಂತರ್‌ರಾಜ್ಯ ಕಳ್ಳರನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕೇರಳದ ವೆಲ್ಲಾಡ್‌ ಒಟ್ಟತ್ತಾಯಿ ನಿವಾಸಿ ಅಲೆಕ್ಸ್‌ ಡೊಮಿನಿಕ್‌ (25), ಕ್ಯಾಲಿಕಟ್‌ ಕುರಚೂರು ನಿವಾಸಿ ಅಮಲ್‌ ಕೃಷ್ಣ (25) ಎಂದು ಗುರುತಿಸಲಾಗಿದೆ.

ಆರೋಪಿಗಳು ಮಂಗಳೂರಿಗೆ ಬಂದು ಸ್ನೇಹಿತರನ್ನು ಭೇಟಿ ಮಾಡಲು ಜಂಕ್ಷನ್‌ ರೈಲ್ವೇ ನಿಲ್ದಾಣ ಪ್ರದೇಶದಲ್ಲಿ ಸುತ್ತಾಡಿದ್ದಾರೆ. ಈ ವೇಳೆ ನಾಗುರಿಯ ಬಸ್‌ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್‌ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನದ ಬಳಿ ಪಾರ್ಕ್ ಮಾಡಿದ್ದ ಸ್ಕೂಟರನ್ನು ಕೀ ಇಲ್ಲದೆ ‘ಡೈರೆಕ್ಟ್ ಕನೆಕ್ಟ್ ಮಾಡಿ ಕಳವು ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ, ಆರೋಪಿಗಳಿಂದ 2 ಸ್ಕೂಟರ್‌ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಎರಡು ಮೊಬೈಲ್‌ ಫೋನ್‌ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *