ಪುತ್ತೂರು: ಜಾನುವಾರಗಳ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26) ಹಾಗೂ ಅಬ್ದುಲ್ ಲತೀಫ್ (25) ಎಂದು ಗುರುತಿಸಲಾಗಿದೆ.

ಇನೋವಾ ಕಾರಿನಲ್ಲಿ ನಾಲ್ಕು ಕರುಗಳು ಹಾಗೂ ಒಂದು ದನವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಮಧ್ಯದಲ್ಲಿ ವಾಹನ ದುರಸ್ತಿಗೀಡಾಗುತ್ತಿದ್ದಂತೆಯೇ, ವಾಹನದಲ್ಲಿದ್ದವರು ಜಾನುವಾರುಗಳನ್ನು ಪುತ್ತೂರು ನರಿಮೊಗರು ಪ್ರದೇಶದ ನಡುರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದರು.

ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಇನೋವಾ ಕಾರನ್ನೂ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




