Breaking
22 Mar 2026, Sun

ಕುದ್ರೋಳಿ ಗ್ರೀನ್ ಪಾರ್ಕ್ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿ ಅರೆಸ್ಟ್

ಮಂಗಳೂರು: ಕುದ್ರೋಳಿ ಗ್ರೀನ್ ಪಾರ್ಕ್ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಬಂದರು ಅನ್ಸಾರಿ ರೋಡ್ ನಿವಾಸಿ ಮಹಮ್ಮದ್ ಹನೀಫ್ (42) ಎಂದು ಗುರುತಿಸಲಾಗಿದೆ.

ತೂರಾಡಿಕೊಂಡು ಹೋಗುತ್ತಿದ್ದ ಆತನನ್ನು ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ.

ಆರೋಪಿ ವಿರುದ್ಧ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *