Breaking
22 Mar 2026, Sun

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ತಗುಲಿದ ಬೆಂಕಿ

ಮಂಗಳೂರು : ನಗರದ ಪಾದುವಾ ಹೈಸ್ಕೂಲ್ ಮತ್ತು ಭದ್ರಕಾಳಿ ದೇವಸ್ಥಾನದ ಸಮೀಪದ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಡಿ. 3 ರಂದು ಸಂಭವಿಸಿದೆ.

ಹಂಚಿನ ಮನೆಯಾಗಿದ್ದು, ಮನೆಯ ಛಾವಣಿಯಿಂದ ಹೊಗೆ ಹೊರಸೂಸುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿಯಿಂದ ಮನೆಯ ಛಾವಣಿ ಭಾಗಶಃ ಸುಟ್ಟುಹೋಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮನೆಯಲ್ಲಿ ಇದ್ದ ವಿದ್ಯುತ್ ಉಪಕರಣಗಳೂ ಸಂಪೂರ್ಣವಾಗಿ ಸುಟ್ಟುಹೋಗಿವೆ.

ಘಟನೆ ಸಂಭವಿಸಿದ ಸಮಯದಲ್ಲಿ ಮನೆಯೊಳಗೆ ಯಾರೂ ಇರದೇ ಇದ್ದುದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

Leave a Reply

Your email address will not be published. Required fields are marked *