Breaking
22 Mar 2026, Sun

ರಾಜ್ಯಕ್ಕೆ ಮುಂದಿನ 4 ದಿನ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದಂತೆ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಒಣ ಹವೆ ಹಾಗೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *