Breaking
22 Sep 2026, Tue

ಉಡುಪಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಅರೆಸ್ಟ್

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ(37) ಎಂದು ಗುರುತಿಸಲಾಗಿದೆ.

ಉಡುಪಿ ನಗರದ ಒಳಕಾಡು ನಿವಾಸಿ ಶೈಲಾ ವಿಲ್ಹೆಲ್ ಮೀನಾ ಎಂಬವರು ನ.30ರಂದು ಬೆಳಗ್ಗೆ ಚರ್ಚಿಗೆ ಹೋಗಲು ಚಿನ್ನಾಭರಣ ಇಟ್ಟಿದ್ದ ಬೆಡ್‌ರೂಂನ ಕಪಾಟು ತೆರೆದಾಗ ಅದರಲ್ಲಿಟ್ಟಿದ್ದ ಸುಮಾರು 548.31 ಗ್ರಾಂ ಚಿನ್ನಾಭರಣ ಹಾಗೂ ಮೊಬೈಲ್ ಫೋನ್‌ ಕಳವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ಯ, ಕಾರ್ಯಾಚರಣೆ ನಡೆಸಿದ ಉಡುಪಿ ನಗರ ಪೊಲೀಸರು ಕಿನ್ನಿಮೂಲ್ಕಿ ಹಿರೇನ್ ಬಾರ್ ಬಳಿ ಆರೋಪಿಯನ್ನು ಬಂಧಿಸಿ, ಆರೋಪಿಯಿಂದ, ಕಳವು ಮಾಡಿದ 548.31 ಗ್ರಾಂ ತೂಕದ 65,79,720 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ವಿರುದ್ದ ಈಗಾಗಲೇ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಮನೆಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *