Breaking
22 Mar 2026, Sun

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ : 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು , ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮತ್ತು ಜಮೀನುಗಳು ತೀರಾ ಅಪಾಯದ ಮಟ್ಟದಲ್ಲಿದ್ದು ನೀರಿನ ಸೆಳೆತಕ್ಕೆ ಕೊಚ್ಚಿ ಕುಸಿತಕ್ಕೊಳಗಾಗುವ ಸಾಧ್ಯತೆ ಇರುವುದರಿಂದ ಆ ಭಾಗದಲ್ಲಿ ಅಗತ್ಯವಾಗಿ ತಡೆಗೋಡೆ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಸೇತುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಶಾಸಕರು ಜು. 31 ರಂದು ಸರಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿಯನ್ನು ನೀಡಿದರು.

ಸದ್ರಿ ಮನವಿಗೆ ಸ್ಪಂದಿಸಿದ ರಾಜ್ಯ ಸರಕಾರ ರೂ.10.67 ಕೋಟಿ ಅನುದಾನವನ್ನು ಮಂಜೂರುಗೊಳಿಸಿದೆ.

ಈ ಸಂದರ್ಭದಲ್ಲಿ ಅನುದಾನವನ್ನು ಮಂಜೂರುಗೊಳಿಸಿದ ರಾಜ್ಯ ಸರಕಾರಕ್ಕೆ ಶಾಸಕರಾದ ಹರೀಶ್ ಪೂಂಜರವರು ತಾಲೂಕಿನ ಜನತೆಯ ಪರವಾಗಿ ಧನ್ಯವಾದಗಳನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *