Breaking
22 Sep 2026, Tue

ಕಬಕದ ರೈಲ್ವೇ ಸೇತುವೆ ಬಳಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ

ಪುತ್ತೂರು: ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂದು ಗುರುತಿಸಲಾಗಿದೆ.

ರೈಲ್ವೇ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎಂಬ ನಿಖರ ಮಾಹಿತಿ ಪಡೆದ ಪುತ್ತೂರು ನಗರ ಪೊಲೀಸ್ ತಂಡ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತುವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *