Breaking
23 Mar 2026, Mon

ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು: ಐವರಿಗೆ ಗಾಯ

ಬಂಟ್ವಾಳ: ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಚಾಲಕ ಸೇರಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದಲ್ಲಿ ಡಿ. 3ರಂದು ಸಂಜೆ ನಡೆದಿದೆ.

ಗಂಭೀರ ಗಾಯಗೊಂಡವರನ್ನು ಪುತ್ತೂರು ಕಬಕ ನಿವಾಸಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಪುತ್ತೂರು ಕಬಕ ನಿವಾಸಿ ಸತೀಶ್‌ ರಾವ್, ಪತ್ನಿ ವೇದವಳ್ಳಿ, ಮೊಮ್ಮಗ – ಹಾಗೂ ಪಡುಮಲೆ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಉದಯ ಕುಮಾರ್ ಪಡುಮಲೆ ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಪುತ್ತೂರಿಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತದ ಸಂಭವಿಸಿದೆ.

ತಕ್ಷಣವೇ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಬಿ.ಸಿ.ರೋಡ್‌ನ ಸೋಮಯಾಜಿ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *