Breaking
10 May 2026, Sun

ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿ ಬಿದ್ದ ಲಾರಿ: ಚಾಲಕ ಅಪಾಯದಿಂದ ಪಾರು

ಭಟ್ಕಳ: ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಬಾವಿಗೆ ಉರುಳಿ ಬಿದ್ದ ಘಟನೆ ಭಟ್ಕಳ ತಾಲೂಕಿನ ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದಿದೆ.

ಕುಂದಾಪುರದ ತೆಕ್ಕಟ್ಟೆಯಿಂದ ಅಕ್ಕಿಯನ್ನು ತುಂಬಿಕೊಂಡು ಶಿಗ್ಗಾವಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಲಾರಿ ಚಾಲಕ ಧಾರವಾಡ ಮೂಲದ ಸಿದ್ದರಾಜು ಘೋರ್ಪಡೆ (34) ಎಂದು ಗುರುತಿಸಲಾಗಿದ್ದು ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಹೋಗುತ್ತಿರುವವರು ನೆರವಿಗೆ ಧಾವಿಸಿ, ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕನನ್ನು ಹೊರತೆಗೆದು ಭಟ್ಕಳದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *