ಮಂಗಳೂರು: ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರಾವಳಿ ಭಾಗದ ವಕೀಲರ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ ನೀಡಿದ್ದು, ಈ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ., ಪ್ರಧಾನ ಸರಕಾರಿ ಅಭಿಯೋಜಕರಾದ ಎಂಪಿ ನರೋನ್ಹ, ಟಿ.ಎನ್. ಪೂಜಾರಿ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.




