Breaking
22 Sep 2026, Tue

ಪರವಾನಗಿ ಇಲ್ಲದೆ ಕೆಂಪುಕಲ್ಲು ಸಾಗಿಸಿದ್ದ ಲಾರಿ ಚಾಲಕ ಪೊಲೀಸ್ ವಶಕ್ಕೆ

ಬಂಟ್ವಾಳ: ಪರವಾನಗಿ ಇಲ್ಲದೆ ಕಾನೂನುಬಾಹಿರವಾಗಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಹಾಗೂ ಚಾಲಕನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಟ್ವಾಳ ತಾಲೂಕಿನ ಕೊಲ್ನಾಡು ಗ್ರಾಮದ ಕೂಡ್ತಮುಗೇರು ಬಳಿ, ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬೋಳ್ಳದೆ ದಿಕ್ಕಿನಿಂದ ಬರುತ್ತಿದ್ದ ಲಾರಿಯನ್ನು ನಿಲ್ಲಿಸಿ ಪರಿಶೀಲಿಸಿದರು. ತಪಾಸಣೆಯಲ್ಲಿ, ಲಾರಿಯಲ್ಲಿ ಕೆಂಪುಕಲ್ಲುಗಳನ್ನು ತುಂಬಿಸಿಕೊಂಡು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಲಾರಿ ಚಾಲಕನನ್ನು ಎನ್.ಸಿ. ಶರೀಪ್ (42) ಎಂದು ಗುರುತಿಸಲಾಗಿದ್ದು, ವಿಚಾರಣೆ ವೇಳೆ ಯಾವುದೇ ಪರವಾನಗಿ ಅಥವಾ ದಾಖಲಾತಿ ಇಲ್ಲದೆ ಕೆಂಪುಕಲ್ಲುಗಳನ್ನು ಕಳ್ಳತನದ ಮೂಲಕ ತುಂಬಿಕೊಂಡು ಸಾಗಿಸುತ್ತಿರುವುದಾಗಿ ತಿಳಿದುಬಂದಿದೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *