Breaking
22 Sep 2026, Tue

ಸಹಕಾರ ರತ್ನ ಟಿ.ಜಿ. ರಾಜಾರಾಮ್ ಭಟ್‌ ಅವರಿಗೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಗೌರವ ಪುರಸ್ಕಾರ

ಬಂಟ್ವಾಳ: ಕರ್ನಾಟಕ ಘನಸರಕಾರದಿಂದ ಸಹಕಾರ ರತ್ನ ಪ್ರಶಸ್ತಿ ಪಡೆದ ಟಿ ಜಿ ರಾಜಾರಾಮ್ ಭಟ್ ಅವರಿಗೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಗೌರವ ಪುರಸ್ಕಾರ ನೀಡಲಾಯಿತು.

ಈ ಸಮಾರಂಭದ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ವಹಿಸಿದ್ದರು.

ಈ ಸಂದರ್ಭದಲ್ಲಿ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ನೌಕಾ ಸೇನೆಯ ನಿವೃತ್ತ ಕಮಾಂಡರ್ ವಸಂತ ರಾವ್, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯ ಶಂಕರ ಬಾಸ್ರೀ ತಾಯ, ದೇವಸ್ಥಾನದ ಸೇವಾ ಟ್ರಸ್ಟ್ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಪ್ರವೀಣ್ ಆಳ್ವ, ಸತ್ಯನಾರಾಯಣ ನಾಯಕ್, ಕಿಶನ್ ಸೇಣವ, ವಿಟ್ಟಲ ಅಮೀನ್, ಪ್ರಮೋದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *