ತಮಿಳುನಾಡು: ಈರೋಡ್‌ನಲ್ಲಿ ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಬಾಲಕನನ್ನು ಈರೋಡ್‌ನ ಅನ್ನೈ ಸತ್ಯ ನಗರದ ಎಂ. ಸಾಯಿ ಶರಣ್ ಎಂದು ಗುರುತಿಸಲಾಗಿದೆ.

ಬಾಲಕ ಮನೆಯಲ್ಲಿ ಬಾಳೆಹಣ್ಣು ತಿನ್ನುವ ವೇಳೆ ಬಾಳೆಹಣ್ಣು ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡು ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿತು. ಆತಂಕಗೊಂಡ ಪೋಷಕರು ನೆರೆಹೊರೆಯವರ ಸಹಾಯದಿಂದ ಮಗುವನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಆದರೆ ಹೆಚ್ಚಿನ ಚಿಕಿತ್ಸೆಗಾಗಿ ನಂತರ ಈರೋಡ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಗು ಉಸಿರುಗಟ್ಟಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ನಂತರ ಮಗುವಿನ ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದ ಬಾಳೆಹಣ್ಣಿನ ತುಂಡನ್ನು ಹೊರತೆಗೆಯಲಾಯಿತು.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




