Breaking
4 Feb 2026, Wed

ಕೊಯಿಲದಲ್ಲಿ ಹೆಡ್‌ಕಾನ್‌ಸ್ಟೇಬಲ್‌ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ: ಹೆಡ್‌ಕಾನ್‌ಸ್ಟೇಬಲ್‌ ಕರ್ತವ್ಯದಿಂದ ಅಮಾನತು

ಕಡಬ: ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶ ಮಾಡಿದ ಕಡಬ ಠಾಣಾ ಹೆಡ್‌ಕಾನ್‌ಸ್ಟೇಬಲ್‌ ಮನೆಯ ಸದಸ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಕೊಯಿಲ ಎಂಬಲ್ಲಿ ಡಿ. 3 ರಂದು ನಡೆದಿದೆ.

ಕಡಬ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ರಾಜು ನಾಯ್ಕ್ ಎಂಬವರು ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿದ್ದರು. ಈ ವೇಳೆ ಮನೆ ಮಂದಿ ಅವರನ್ನು ಹಿಡಿದಿದ್ದು ತಪ್ಪಿಸಿಕೊಳ್ಳುವ ವೇಳೆ ಮನೆಯ ಸದಸ್ಯರೊಬ್ಬರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆಯ ಕುರಿತು ಬಾಬು ಗೌಡ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರಾಜು ನಾಯ್ಕ್ನ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸದ್ಯ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *