Breaking
22 Mar 2026, Sun

ಕೆಲಿಂಜದಲ್ಲಿ ರಸ್ತೆ ದಾಟುತ್ತಿದ್ದ ಹಸುವಿಗೆ ಓಮ್ನಿ ಕಾರು ಡಿಕ್ಕಿ: ಮಹಿಳೆಗೆ ಗಂಭೀರ ಗಾಯ

ಬಂಟ್ವಾಳ : ಕಲ್ಲಡ್ಕ ವಿಟ್ಲ ರಸ್ತೆಯ ಕೆಲಿಂಜದಲ್ಲಿ ರಸ್ತೆ ದಾಟುತ್ತಿದ್ದ ಹಸುವಿಗೆ ಓಮ್ನಿ ಕಾರು ಡಿಕ್ಕಿಯಾಗಿ ಬಳಿಕ ಪಕ್ಕದಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಡಿ.05 ನಡೆದಿದೆ.

ಡಿಕ್ಕಿಯ ರಭಸಕ್ಕೆ ಹಸುವಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡೊಯ್ಯಲಾಗಿದೆ. ಓಮ್ನಿಯಲ್ಲಿದ್ದ ಪ್ರಯಾಣಿಕರಲ್ಲಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಓಮ್ನಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪಕ್ಕದಲ್ಲಿ ನಿಂತಿದ್ದ ಮತ್ತೊಂದು ಕಾರಿಗೆ ಭಾಗಶಃ ಹಾನಿಯಾಗಿದೆ.

Leave a Reply

Your email address will not be published. Required fields are marked *