ಉಡುಪಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎಣ್ಣೆ ಗಿರಣಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಗ್ರಹಿಸಿಟ್ಟಿದ್ದ ತೆಂಗಿನ ಎಣ್ಣೆ ಮತ್ತು ಕೊಬ್ಬರಿ ಬೆಂಕಿಗಾಹುತಿಯಾದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.

ಸಂಜೆ ವೇಳೆ ಈ ಘಟನೆ ಸಂಭವಿಸಿದ್ದು , ಗಿರಣಿಯ ಹೆಚ್ಚಿನ ಭಾಗ ಹಾನಿಗೊಂಡಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಉಡುಪಿಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.





