Breaking
23 Mar 2026, Mon

ಡಿವೈಡರ್‌ಗೆ ಡಿಕ್ಕಿ ಹೊಡೆದು ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು : ಪೊಲೀಸ್‌ ಇನ್ಸ್‌ಪೆಕ್ಟರ್ ದಾರುಣ ಸಾವು

ಧಾರವಾಡ : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ನಡುರಸ್ತೆಯಲ್ಲೇ ಹೊತ್ತಿ ಉರಿದ ಪರಿಣಾಮ ಪೊಲೀಸ್‌ ಇನ್ಸ್‌ಪೆಕ್ಟರ್ ಓವ೯ರು ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ನಡೆದಿದೆ.

ಮೃತರನ್ನು ಪೊಲೀಸ್‌ ಇನ್ಸ್‌ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಎಂದು ಗುರುತಿಸಲಾಗಿದೆ.

ಹಾವೇರಿಯ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಗದಗಕ್ಕೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಈ ಬಗ್ಗೆ ಅಣ್ಣಿಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *