Breaking
12 Aug 2026, Wed

ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೈ ಮುಗಿವ ನೆಪದಲ್ಲಿ ಭಕ್ತರ ಬ್ಯಾಗಿನಿಂದ ಹಣ ದೋಚಿದ ಕಳ್ಳ

ಮಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಭಕ್ತನ ಸೋಗಿನಲ್ಲಿ ಬಂದು 40 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾದ ಘಟನೆ ನಗರದ ಹೊರವಲಯದ ಸುರತ್ಕಲ್ ನ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.6 ರಂದು ಸಂಜೆ ನಡೆದಿದೆ.

ದೇವಸ್ಥಾನದ ಒಳಗೆ ಬಂದು ದೇವರಿಗೆ ಕೈಮುಗಿವ ನೆಪದಲ್ಲಿ ಬ್ಯಾಗ್‌ ಪಕ್ಕದಲ್ಲಿ ನಿಂತುಕೊಂಡೇ ಅದರಲ್ಲಿ ಇರಿಸಲಾಗಿದ್ದ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಸಂಪೂರ್ಣ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಹಣ ಕಳೆದುಕೊಂಡವರು ಸುರತ್ಕಲ್‌ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಪೋಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *