ಬಂಟ್ವಾಳ: ಸರಕಾರಿ ಪ್ರಥಮ ದರ್ಜೆ ಕಾಲೇಜ್ ಸಿದ್ದಕಟ್ಟೆಯ 2025-26ನೇ ಸಾಲಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಡಿ.09 ರಿಂದ 15ರ ವರೆಗೆ ಪಿಲ್ಲಂಬುಗೋಳಿ ದ.ಕ.ಜಿ.ಪಂ.ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಡಿ.09ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಿಬಿರ ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ರಾಯಿ ಸಿದ್ಧಕಟ್ಟೆ ಅಧ್ಯಕ್ಷರು ಹಾಗೂ ಸಿ.ಡಿ.ಸಿ.ಸದಸ್ಯರಾದ ಜಗದೀಶ್ ಕೊಯಿಲಾ, ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಜೈನ್ ಜಂತೋಡಿ, ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಆರಂಬೋಡಿ ಗ್ರಾ. ಪಂ. ಸದಸ್ಯರಾದ ಸುದರ್ಶನ್ ಶೆಟ್ಟಿ ಹಕ್ಕೇರಿ, ಕಾಲೇಜ್ ಪ್ರಾಂಶುಪಾಲರಾದ ಡಾ| ಗಿರೀಶ್ ಭಟ್.ಎ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಲಿದಾರೆ.


ಶಿಬಿರದಲ್ಲಿ ಶ್ರಮದಾನ ಸೇರಿದಂತೆ ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ವಿಶೇಷ ಸಂಪನ್ಮೂಲ ವ್ಯಕ್ತಿಗಳು ಭಾಗಿಯಾಗಲಿದ್ದಾರೆ. ಡಿ.15ರಂದು ಪ್ರಾಂಶುಪಾಲರಾದ ಡಾ| ಗಿರೀಶ್ ಭಟ್.ಎ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಆರಂಬೋಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಿ.ಗಣೇಶ್ ಶೆಟ್ಟಿ ಸಮಾರೋಪ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಸ್ಟ್ ಫೌಂಡೇಷನ್ ಬೆಳ್ತಂಗಡಿ ಸ್ಥಾಪಕಾಧ್ಯಕ್ಷರಾದ ರಕ್ಷಿತ್ ಶಿವರಾಮ್, ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರು ಧರಣೇಂದ್ರ ಕುಮಾರ್, ಲಯನ್ಸ್ ವಲಯ ಸಲಹೆಗಾರರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಜಗದೀಶ ಕೊಯಿಲ ಸೇರಿದಂತೆ ಇನ್ನೂ ಹಲವರು ಭಾಗವಹಿಸಲಿದ್ದಾರೆ.





