Breaking
27 Sep 2026, Sun

ಮಾದಕ ವಸ್ತು ಎಂಡಿಎಂಎ ಮಾರಾಟ : ಮೂವರ ಬಂಧನ

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ತಲಪಾಡಿ ಗ್ರಾಮದ ತಚ್ಚಣಿಯಲ್ಲಿ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಬ್ದುಲ್ ರವೂಫ್ (30), ಶರೀಫ್ ಅಲಿಯಾಸ್ ಅಮೀನ್ (34) ಮತ್ತು ನಿಯಾಜ್ (23) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಪೊಲೀಸರು 42 ಗ್ರಾಂ ಎಂಡಿಎಂಎ, ಒಂದು ಟೊಯೋಟಾ ಕಾರು, ಮೂರು ಮೊಬೈಲ್ ಫೋನ್ ಹ್ಯಾಂಡ್‌ಸೆಟ್‌ಗಳು ಮತ್ತು 2,500 ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾಳಿಯ ಸಮಯದಲ್ಲಿ ಮತ್ತೊಬ್ಬ ಶಂಕಿತ ಸಲಾಮ್ ಸ್ಥಳದಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *