ಬೆಂಗಳೂರು : ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ ಮತ್ತು ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ.
ಮೃತರನ್ನು ಚಾಂದಿನಿ (26) ಮತ್ತು ಅವರ ಮಗು ಯುವಿ (4) ಎಂದು ಗುರುತಿಸಲಾಗಿದೆ.
ಪ್ರತಿದಿನ ದೊಡ್ಡ ಮಗಳನ್ನು ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಡಿ. 08ರಂದು ಮಗಳನ್ನು ಕರೆದುಕೊಂಡು ಬರಲು ಶಾಲೆಗೆ ಹೋಗದ ಕಾರಣ ಶಾಲೆಯವರು ಚಾಂದಿನಿ ಪತಿ ಕಿರಣ್‌ಗೆ ಫೋನ್ ಮಾಡಿದ್ದರು. ಬಳಿಕ ಚಾಂದಿನಿಗೆ ಕರೆ ಮಾಡಿದರೆ ಚಾಂದಿನಿ ರಿಸೀವ್ ಮಾಡಿರಲಿಲ್ಲ. ಇದರಿಂದ ಕಿರಣ್ ತಮ್ಮನಿಗೆ ಕರೆ ಮಾಡಿ ನೋಡುವಂತೆ ತಿಳಿಸಿದ್ದರು.

ಕಿರಣ್ ತಮ್ಮ ,ಪ್ರವೀಣ್ ಮನೆಗೆ ಬಂದು ನೋಡಿದಾಗ ಬಾತ್ ರೂಮ್‌ನಲ್ಲಿ ತಾಯಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದೆ. ತಕ್ಷಣವೇ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





