Breaking
12 Aug 2026, Wed

ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿಯ ಬಂಧನ

ಮಂಗಳೂರು: ವಿದೇಶದಲ್ಲಿದ್ದುಕೊಂಡು ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಓವ೯ನನ್ನು ಪೊಲೀಸರು ಬಂಧಿಸಿದ್ದಾರೆ.

ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಬಂಧಿತ ಆರೋಪಿಯಾಗಿದ್ದಾನೆ.

ಮೂಲತಃ ಮು೦ಬೈಯ ಚಾರ್ಕೊಪ್ ನಿವಾಸಿಯಾಗಿದ್ದ ಈತ 2024ರ ಫೆಬ್ರವರಿಯಲ್ಲಿ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾಗ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿದ್ದ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈತ ಮುಂಬೈ ಸಹರಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ಮಾಹಿತಿ ಪಡೆದ ಪೊಲೀಸ್‌ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿಯೇ ಬ೦ಧಿಸಿ ಮ೦ಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *