Breaking
10 May 2026, Sun

ಮೊಟ್ಟೆ ಸಾಗಾಟದ ವಾಹನಕ್ಕೆ ಲಾರಿ ಢಿಕ್ಕಿ

ಮಂಗಳೂರು: ಮೊಟ್ಟೆ ಸಾಗಾಟದ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಡಿ. 8 ರಂದು ನಡೆದಿದೆ.

ಫರಂಗಿಪೇಟೆ ಕಡೆಯಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಾಹನ ಡಿವೈಡ‌ರ್ ಮೇಲೆ ಹತ್ತಿ ಮಗುಚಿ ಬಿದ್ದಿದೆ.

ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ರಸ್ತೆಯಲ್ಲಿ ಮೊಟ್ಟೆ ಒಡೆದು ಚೆಲ್ಲಿದ ಕಾರಣ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *