Breaking
23 Mar 2026, Mon

ಬೈಕ್ ಹಾಗೂ ಬಸ್ ನಡುವೆ ಅಪಘಾತ: ಇಬ್ಬರು ಯುವಕರು ಮೃತ್ಯು

ಹಾಸನ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮದಲ್ಲಿ ಡಿ. 08ರಂದು ನಡೆದಿದೆ.

ಮೃತರನ್ನು ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂದು ಗುರುತಿಸಲಾಗಿದೆ.

ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ ಅಪಘಾತ ಸಂಭವಿಸಿದ್ದು, ಢಿಕ್ಕಿಯ ರಭಸಕ್ಕೆ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಹೊನ್ನೇಗೌಡ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *