Breaking
10 May 2026, Sun

ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಬಂಟ್ವಾಳ: ಕರೋಪಾಡಿ ಗ್ರಾಮದ ಪದ್ಯಾನ ಗಡಿಭಾಗ ಎಂಬಲ್ಲಿ ಅಲ್ಯುಮಿನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಡಿ.7 ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ನಾರಾಯಣ ನಾಯ್ಕ್ ಎಂದು ಗುರುತಿಸಲಾಗಿದೆ.

ಮನೆಯ ಎದುರುಗಡೆಯ ತೆಂಗಿನ ಮರದಿಂದ ಅಲ್ಯುಮಿನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ಪಕ್ಕದಲ್ಲಿರುವ ಎಚ್ ಟಿ ಲೈನ್ ವಿದ್ಯುತ್ ತಂತಿಗೆ ತಗುಲಿ ಈ ಘಟನೆ ಸಂಭವಿಸಿದೆ.

ತಕ್ಷಣ ಅವರನ್ನು ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *