Breaking
12 Aug 2026, Wed

ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ: 570 ಜನರ ಬಂಧನ

ಬೆಳಗಾವಿ : ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಅನ್ನಭಾಗ್ಯ ಯೋಜನೆಯ ಕುರಿತು ಚರ್ಚೆ ನಡೆದಿದ್ದು, ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಈವರೆಗೆ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಸದಸ್ಯ ಸಿ.ಟಿ.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಈ ಪ್ರಕರಣದಲ್ಲಿ ಈವರೆಗೆ 29,603.15 ಕ್ವಿಂಟಾಲ್ ಅಕ್ಕಿ, 314 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

Leave a Reply

Your email address will not be published. Required fields are marked *