Breaking
10 May 2026, Sun

ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಡಕ್‌ ಎಚ್ಚರಿಕೆ!

ಬೆಳಗಾವಿ: ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿಲ್ಲ ಹಾಗೂ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆಪಿಎಂಇ ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿಲ್ಲ. ಆದರೆ ಹಣ ವಸೂಲಿಗಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

Leave a Reply

Your email address will not be published. Required fields are marked *