ಬಂಟ್ವಾಳ: ಅಜ್ಜಿಬೆಟ್ಟು ಗ್ರಾಮದ ದೇರೊಟ್ಟುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಉರುಳಿ ಬಿದ್ದು ಪಾದಚಾರಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಗೋಪಾಲ ಶೆಟ್ಟಿಗಾರ್ (60) ಎಂದು ಗುರುತಿಸಲಾಗಿದೆ.

ಗೋಪಾಲ್ ಶೆಟ್ಟಿಗಾರ್ ಅವರು ನಡೆದುಕೊಂಡು ಬರುತ್ತಿದ್ದ ವೇಳೆ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ದೇರೊಟ್ಟುವಿನ ಚಡವಿನಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.
ವಾಹನದ ಚಾಲಕ ವಾಹನವನ್ನು ಬ್ರೇಕ್ ಹಾಕಿ ನಿಯಂತ್ರಿಸಲಾಗದೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಗೋಪಾಲ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪಿಕಪ್‌ನಿಂದ ಹಾರಿದ ಸುಂದರ್ ನಾಯ್ಕ ಅವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



