Breaking
22 Mar 2026, Sun

ಬೆಂಗಳೂರು ಕೂಡ್ಲು ಗೇಟ್‌ನಲ್ಲಿ ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿ: ಬಂಟ್ವಾಳದ ಯುವಕ ಸಾವು

ಬೆಂಗಳೂರು: ಬೈಕ್‌ ಗೆ ಗೂಡ್ಸ್‌ ವಾಹನ ಡಿಕ್ಕಿಯಾಗಿ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನ ಕೂಡ್ಲು ಗೇಟ್ ಸಮೀಪದಲ್ಲಿ ಡಿ. 9 ರಂದು ನಡೆದಿದೆ.

ಮೃತಪಟ್ಟ ಯುವಕನನ್ನು ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಅಲ್ಲಿಪಾದೆ ಯುವಕ ಮುಹಮ್ಮದ್ ಹಾರಿಸ್ (34) ಎಂದು ಗುರುತಿಸಲಾಗಿದೆ.

ಬೆಂಗಳೂರು ನಗರದಲ್ಲಿರುವ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಹಾರಿಸ್ ಅವರು ಕೆಲಸದ ನಿಮಿತ್ತ ಸಹೋದ್ಯೋಗಿಯೋರ್ವನೊಡನೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗೂಡ್ಸ್ ವಾಹನ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಾರಿಸ್ ಸ್ಥಳದಲ್ಲೇ ಮೃತಪಟ್ಟಿದ್ಧಾರೆ ಎಂದು ತಿಳಿದುಬಂದಿದೆ.

ಹಿಂಬದಿಯಲ್ಲಿದ್ದ ಸಹೋದ್ಯೋಗಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *