Breaking
22 Mar 2026, Sun

ರಸ್ತೆ ದಾಟುತ್ತಿದ ಪಾದಚಾರಿಗೆ ಬೈಕ್ ಡಿಕ್ಕಿ: ಪಾದಚಾರಿ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಸೀದಿ ಬಳಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿ. 9 ರಂದು ತಡರಾತ್ರಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕಿನ್ನಿಗೋಳಿಯ ರೋನಾಲ್ಡ್ ಡಿಸೋಜಾ ಎಂದು ಗುರುತಿಸಲಾಗಿದೆ.

ಉಚ್ಚಿಲದಿಂದ ಕಾಪು ಕಡೆಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ರೋನಾಲ್ಡ್ ಅವರು ರಸ್ತೆಗೆ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *