ಉಡುಪಿ: ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಡಿ. 10 ರಂದು ನಡೆದಿದೆ.
ಮೃತಪಟ್ಟ ಟಿಪ್ಪರ್ ಚಾಲಕನನ್ನು ಶ್ರೀಕಾಂತ್(26) ಎಂದು ಗುರುತಿಸಲಾಗಿದೆ.

ಪೇತ್ರಿ–ಮಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟಿಪ್ಪರ್ ರಸ್ತೆಯದಲ್ಲಿದ್ದ ಹೊಂಡಕ್ಕೆ ಬಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ್ದು, ವಾಹನ ರಸ್ತೆ ಬಲ ಬದಿಯ ದೊಡ್ಡ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಪ್ಪರ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





