Breaking
22 Sep 2026, Tue

ಗೂಗಲ್ ಮ್ಯಾಪ್ ನೋಡಿ ಗೋಡೆಗೆ ಡಿಕ್ಕಿ ಹೊಡೆದ ಲಾರಿ

ಮೂಡುಬಿದಿರೆ: ಪಾಲಡ್ಕ ಗ್ರಾ.ಪಂ ವ್ಯಾಪ್ತಿಯ ಕಡಂದಲೆ ಇಳಿಜಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಗೋಡೆಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ.

ಚಾಲಕ ಗೂಗಲ್ ಮ್ಯಾಪ್ ಬಳಸಿಕೊಂಡು ಪ್ರಯಾಣಿಸುತ್ತಿದ್ದ ವೇಳೆ, ಇಳಿಜಾರು ಪ್ರದೇಶದಲ್ಲಿ ಹೊಸದಾಗಿ ನಿರ್ಮಾಣವಾದ ರಸ್ತೆಯ ಕಾರಣ ಗೊಂದಲ ಉಂಟಾಗಿ, ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ಗೋಡೆಗೆ ಢಿಕ್ಕಿ ಹೊಡೆದಿದೆ.

ಚಾಲಕ ನೀಡಿದ ಮಾಹಿತಿಯಂತೆ “ನಾನು ಮೂಡಬಿದಿರೆಯ ಪೇಪರ್ ಮಿಲ್ ಕಡೆಗೆ ಹೋಗಬೇಕಿತ್ತು ಆದರೆ ಗೂಗಲ್ ಮ್ಯಾಪ್ ನೋಡಿ ತಪ್ಪು ದಾರಿಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *