Breaking
26 Jun 2026, Fri

ಅಕ್ರಮ ಕಸಾಯಿಖಾನೆಗೆ ದನ–ಕರು ಮಾರಾಟ ಮಾಡಿದ ವ್ಯಕ್ತಿಯ ಬಂಧನ

ಕಾರ್ಕಳ: ಅಕ್ರಮ ಕಸಾಯಿಖಾನೆಗೆ ದನ ಮತ್ತು ಕರುವನ್ನು ಮಾರಾಟ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನಲ್ಲೂರಿನ ನಿವಾಸಿ, ಶಿವಪ್ರಸಾದ್ ಅಲಿಯಾಸ್ ಅನ್ನು ಮಡಿವಾಳ(28) ಎಂದು ಗುರುತಿಸಲಾಗಿದೆ.

ನ. 12 ರಂದು ಕಾರ್ಕಳ ಪೊಲೀಸರು ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಆರೋಪದಲ್ಲಿ ಅಶ್ರಫ್ ಹಾಗೂ ಆತನ ಪತ್ನಿಯನ್ನು ಬಂಧಿಸಿದ್ದರು. ಬಳಿಕ ನಲ್ಲೂರಿನ ಅಶ್ರಫ್ ಆಲಿ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಪಡೆದ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಹಲವು ಮಹತ್ವದ ಮಾಹಿತಿಗಳನ್ನು ಬಾಯಿ ಬಿಟ್ಟಿದ್ದಾನೆ.

ಜಾನುವಾರು ಬ್ರೋಕರಾಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್, ದನಗಳನ್ನು ಮಾರಾಟ ಮಾಡುವ ಹೆಸರಿನಲ್ಲಿ ಸಾಕು ದನ ಹಾಗೂ ಕರುಗಳನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಕಸಾಯಿಖಾನೆಗೆ ಮಾರಾಟ ಮಾಡುತ್ತಿದ್ದನು ಎನ್ನಲಾಗಿದೆ.

ಬಂಧಿತ ಶಿವಪ್ರಸಾದ್‌ರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *