Breaking
21 Mar 2026, Sat

ಪಡುಬಿದಿರೆಯಲ್ಲಿ ಟಯರ್ ಸ್ಫೋಟದಿಂದ ಟೆಂಪೋ ಮಗುಚಿ: ಮಹಿಳೆ ಸಾವು, ಹಲವರಿಗೆ ಗಾಯ

ಪಡುಬಿದಿರೆ: ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ಟೆಂಪೋವೊಂದರ ಟಯರ್‌ ಸ್ಫೋಟಗೊಂಡ ಪರಿಣಾಮ ಟೆಂಪೋ ಮಗುಚಿ ಬಿದ್ದು ಓರ್ವ ಮಹಿಳೆ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು(ಡಿ11) ಬೆಳಗ್ಗೆ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಪಾರ್ವತಿ(30) ಎಂದು ಗುರುತಿಸಲಾಗಿದೆ.

ಮೂಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಪುರುಷರು ಮತ್ತು ಮಹಿಳೆಯರು ಸೇರಿದಂತೆ ಕಾಂಕ್ರೀಟ್ ಮಿಕ್ಸಿಂಗ್‌ ಯಂತ್ರ ಪರಿಕರಗಳು ಸಾಗಿಸಲಾಗುತ್ತಿತ್ತು. ಈ ವೇಳೆ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿದ ಸ್ಥಳೀಯರು ಟೆಂಪೋದ ಅಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ಹೊರತೆಗೆಯಲು ಸಹಾಯ ಮಾಡಿದ್ದಾರೆ.

ಯಂತ್ರದ ಅಡಿಯಲ್ಲಿ ಸಿಲುಕಿದ್ದ ಮಹಿಳೆಯನ್ನು ಕ್ರೇನ್‌ನ ಸಹಾಯದಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪಡುಬಿದ್ರೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *