ಶಿವಮೊಗ್ಗ: ಜಿಲ್ಲೆಯ ಕೇಂದ್ರ ಕಾರಾಗೃಹದೊಳಗೆ ಬಂಧಿತನನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿಯೋರ್ವ ಮಾದಕ ವಸ್ತುವನ್ನು ಪ್ಯಾಂಟ್‌ನ ಜೇಬಿನಲ್ಲಿಟ್ಟುಕೊಂಡು ಸಾಗಿಸಲು ಯತ್ನಿಸಿದ ಘಟನೆ ಡಿ.9ರಂದು ನಡೆದಿದೆ.
ಬಂಧಿತ ಆರೋಪಿಯನ್ನು ಶಕೀಬ್ ಎಂದು ಗುರುತಿಸಲಾಗಿದೆ.

ಕೈದಿ ಅಶೋಕ್ ನನ್ನು ನೋಡಲು ಶಕೀಬ್ ಮಾರುತಿ ಸುಜುಕಿ ಕಾರಿನಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬಂದಿದ್ದ. ಈ ವೇಳೆ ಕರ್ತವ್ಯ ನಿರತರಾದ ಅಧಿಕಾರಿಗಳು ಬಂಧಿತನಿಗೆ ನೀಡಲು ತಂದಿದ್ದ ಬಟ್ಟೆ ಹಾಗೂ ಇತರೆ ವಸ್ತುಗಳನ್ನು ಪರಿಶೀಲಿಸಿದರು. ಪರಿಶೀಲನೆಯ ಸಂದರ್ಭದಲ್ಲಿ ನಾಲ್ಕು ಜೀನ್ಸ್ ಪ್ಯಾಂಟ್‌ಗಳ ಸೊಂಟದ ಪಟ್ಟಿಯ ಒಳಗಡೆ ಹಾಗೂ ಜಿಪ್ ಪಟ್ಟಿಯಲ್ಲಿ ಗಾಂಜಾ ಅಡಗಿಸಿದ್ದಿರುವುದು ಪತ್ತೆಯಾಗಿದೆ.

ಹೆಚ್ಚಿನ ತಪಾಸಣೆಗೆ ಒಳಪಡಿಸಿದಾಗ, ಆತನ ಬಳಿ 9,910 ರೂ. ನಗದು ಹಣ ಪತ್ತೆಯಾಗಿದೆ. ನಂತರ ಭದ್ರತಾ ಸಿಬ್ಬಂದಿ ಗಾಂಜಾ, ನಗದು ಹಾಗೂ ಮಾರುತಿ ಸುಜುಕಿ ಕಾರನ್ನು ವಶಪಡಿಸಿಕೊಂಡಿದ್ದಾರೆ.




