ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ಪ್ರಣವಾನಂದ ಸ್ವಾಮೀಜಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಇಂದು (ಡಿ.11) ಭೇಟಿಯಾಗಿ ಆಶೀರ್ವಾದ ಪಡೆದರು.

ಈ ವೇಳೆ ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸಮುದಾಯಗಳ ಹಲವು ಬೇಡಿಕೆಗಳ ಈಡೇರಿಕೆಗಾಗಿ 41 ದಿನಗಳ ಕಾಲ 700 ಕಿಲೋಮೀಟರ್ ಐತಿಹಾಸಿಕ ಪಾದಯಾತ್ರೆಯನ್ನು ಕೈಗೊಳ್ಳಲಿರುವ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಂಕ್ಯಾರು ಉಪಸ್ಥಿತರಿದ್ದರು.




