Breaking
20 Jun 2026, Sat

ಕಾರು ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಉಪ್ಪಿನಂಗಡಿ: ನೆಕ್ಕಿಲಾಡಿಯಲ್ಲಿ ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.11ರಂದು ರಾತ್ರಿ ನಡೆದಿದೆ.

ಗಾಯಗೊಂಡವರನ್ನು ಮಠ ನಿವಾಸಿ ಬದ್ರುದ್ದೀನ್ ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿಯಿಂದ ನೆಕ್ಕಿಲಾಡಿಗೆ ರಾಂಗ್ ಸೈಡ್‌ನಲ್ಲಿ ಸಾಗುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಬೈಕ್ ಗೆ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ತಕ್ಷಣವೇ ಗಂಭೀರ ಗಾಯಗೊಂಡ ಬದ್ರುದ್ದೀನ್‌ ಅವರನ್ನು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *