ಆಂಧ್ರಪ್ರದೇಶ: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ.
ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ಸಿನಲ್ಲಿ ಇಬ್ಬರು ಚಾಲಕರು, ಒಬ್ಬರು ಕ್ಲೀನರ್,35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.





