ಚಿತ್ರದುರ್ಗ: ಚೆಕ್ ಡ್ಯಾಂನಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜಿ.ಆರ್ ಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕರನ್ನು ವಿಶ್ವನಾಥ್ (23), ಮಾರುತಿ (19) ಎಂದು ಗುರುತಿಸಲಾಗಿದೆ.

ಜಿ.ಆರ್ ಹಳ್ಳಿ ಗ್ರಾಮದ ಬಳಿ ಇರುವ ಚೆಕ್ ಡ್ಯಾಂನಲ್ಲಿ ಕುರಿ ತೊಳೆಯುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಇಬ್ಬರಿಗೂ ಈಜು ಬಾರದ ಕಾರಣ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





