Breaking
23 Mar 2026, Mon

ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಪ್ರಗತಿ – ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ ಹಾಗೂ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇವರ ಸಹಯೋಗದೊಂದಿಗೆ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು.

ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಜಯರಾಮ ಪೂಜಾರಿ ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳಲ್ಲಿ ಶಿಸ್ತು, ದುಶ್ಚಟದಿಂದಾಗುವ ದುಷ್ಪರಿಣಾಮ, ಹಿರಿಯರಿಗೆ ತಂದೆ -ತಾಯಿ, ಗುರುಗಳಿಗೆ ನೀಡುವ ಗೌರವ, ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಸಂಸ್ಕೃತಿ ಸಂಸ್ಕಾರ , ಉತ್ತಮ ಆಚಾರ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ ಸುಬ್ರಮಣ್ಯ ಭಟ್.ವಿ , ಕಳ್ಳಿಗೆ ಒಕ್ಕೂಟದ ಅಧ್ಯಕ್ಷ ಜಯಂತ, ತುಂಬೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಉಪಸ್ಥಿತರಿದ್ದರು.

ಗ್ರಾಮಾಭಿವೃದ್ಧಿ ಯೋಜನೆ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಆನಂದ ವಂದಿಸಿ, ದೈಹಿಕ ಶಿಕ್ಷಣದ ನಿರ್ದೇಶಕರಾದ ಸಾಯಿ ರಾಮ್ ನಾಯ್ಕ್ ರವರು ಸ್ವಾಗತಿಸಿ, ನಿರೂಪಿಸಿದರು.

Leave a Reply

Your email address will not be published. Required fields are marked *