Breaking
26 Jun 2026, Fri

ಮಕ್ಕಳಲ್ಲಿ ಶಿಕ್ಷಕರು ಕಲಿಕೆಯೊಂದಿಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸಬೇಕು: ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕೆ.

ಬಂಟ್ವಾಳ: ಶಿಕ್ಷಕರು ನಿರಂತರ ಅಧ್ಯಯನ ಶೀಲರಾಗಿ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ಮಕ್ಕಳಲ್ಲಿ ಕಲಿಕೆಯೊಂದಿಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವಲ್ಲಿ ಸಹಕರಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕೆ. ಹೇಳಿದರು.

ಅವರು ಮೊಡಂಕಾಪು ದೀಪಿಕಾ ಶಾಲೆಗಳ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ವಿದ್ಯಾ ಕುಮಾರಿ , ಸರಕಾರಿ ನೌಕರ ಸಂಘದ ಅಧ್ಯಕ್ಷ ಶಿವ ಪ್ರಸಾದ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಜೋಯಲ್ ಲೋಬೋ, ಪ್ರಾಥಮಿಕ ಶಾರೀರಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ , ಚಿತ್ರ ಕಲಾ ಶಿಕ್ಷಕ ಸಂಘದ ಅಧ್ಯಕ್ಷ ಮುರಳೀಧರ ಆಚಾರ್ಯ, ಕಾರ್ಯಕ್ರಮ ನೋಡಲ್ ಅಧಿಕಾರಿ ಪ್ರತಿಮಾ, ಜಿಪಿಟಿ ಸಂಘದ ಅಧ್ಯಕ್ಷ ಗುರುರಾಜ್ ಉಪಸ್ಥಿತರಿದ್ದರು.

ಶಿಕ್ಷಣ ಸಂಯೋಜಕಿ ಸುಧಾ ಸ್ವಾಗತಿಸಿ, ಶಿಕ್ಷಣ ಸಂಯೋಜಕರಾದ ರಮಾನಂದ , ಸುರೇಖಾ ಯಳವಾರ ನಿರೂಪಿಸಿ, ವಂದಿಸಿದರು.

ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಕರ್ನಾಟಕ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ವತಿಯಿಂದ ಸಹಪಠ್ಯ ಚಟುವಟಿಕೆಗಳ ವಿವಿಧ ಸ್ಪರ್ಧೆಗಳನ್ನು ಸಂಯೋಜಿಸಲಾಗಿತ್ತು.

ತೀರ್ಪುಗಾರರಾಗಿ ನಿವೃತ್ತ ಶಿಕ್ಷಕರಾದ ಮಹಾಬಲೇಶ್ವರ ಹೆಬ್ಬಾರ್ , ಜಯಾನಂದ ಪೆರಾಜೆ, ವೆಂಕಟಕೃಷ್ಣ ಭಟ್, ವಿದ್ಯಾ ಭಟ್ , ಜಗದೀಶ್ ಹೊಳ್ಳ ಭಾಗವಹಿಸಿದ್ದರು.

Leave a Reply

Your email address will not be published. Required fields are marked *