ಸುಳ್ಯ: ಮೈಸೂರು ಬಳಿಯ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದು ಸುಳ್ಯದ ಯುವಕನೊಬ್ಬ ಮೃತಪಟ್ಟ ಘಟನೆ ಡಿ.12 ರಂದು ನಡೆದಿದೆ.
ಮೃತನನ್ನು ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದ ಕಲ್ತಾರ್ ನಿವಾಸಿ ಶೇಷಪ್ಪ ನಾಯಕ್ ಅವರ ಪುತ್ರ ದೀಕ್ಷಿತ್ (25) ಎಂದು ಗುರುತಿಸಲಾಗಿದೆ.

ದೀಕ್ಷಿತ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಬೆಂಗಳೂರಿನಿಂದ ಕಂದಡ್ಕದ ಕಲ್ತಾರ್‌ನಲ್ಲಿರುವ ತನ್ನ ಊರಿಗೆ ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.

ಅಪಘಾತದಲ್ಲಿ ದೀಕ್ಷಿತ್ ಅವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.




