Breaking
26 Jun 2026, Fri

ಬಸ್ ಹಾಗೂ ಪೆಟ್ರೋಲ್‌ ಟ್ಯಾಂಕ‌ರ್ ನಡುವೆ ಅಪಘಾತ: ಓರ್ವ ಮಹಿಳೆ ಗಂಭೀರ

ಶಿವಮೊಗ್ಗ: ಖಾಸಗಿ ಬಸ್ ಹಾಗೂ ಪೆಟ್ರೋಲ್‌ ಟ್ಯಾಂಕ‌ರ್ ನಡುವೆ ಅಪಘಾತ ಸಂಭವಿಸಿ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಕೋಡೂರು ಬಳಿ ಇಂದು (ಡಿ.13) ಬೆಳಗ್ಗೆ ನಡೆದಿದೆ.

ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ, ಕೆಲ ಪ್ರಯಾಣಿಕರಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *